6
ತಂದೆತಾಯಿಗಳೂ ಮಕ್ಕಳೂ
*ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಯಜಮಾನರೂ ದಾಸರೂ
§ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ *ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ. ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ §ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. *ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
ದೇವರ ಸರ್ವಾಯುಧಗಳು
10 ಕಡೆಯದಾಗಿ, ನೀವು ಕರ್ತನಲ್ಲಿಯೂ §ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ *ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12 ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, §ಈ ಅಂಧಕಾರದ *ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13 ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14 ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, §ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, 15 *ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16 ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17 ಇದಲ್ಲದೆ §ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು *ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. 18 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ §ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ *ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. 19 ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು §ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. 20 ಆ ಸುವಾರ್ತೆಯ ನಿಮಿತ್ತವಾಗಿ *ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
ಕಡೆ ಮಾತುಗಳು
21 ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ §ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. 22 ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
23 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ *ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ. 24 ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.
* 6:1 ಜ್ಞಾ. 1:8; 6:20; 23:22; ಕೊಲೊ 3:20: 6:2 ವಿಮೋ 20:12; ಧರ್ಮೋ 5:16: 6:4 ಆದಿ 18:19; ಧರ್ಮೋ 4:9; 6:7; 11:19; ಜ್ಞಾ. 19:18; 22:6; 29:17 ಇತ್ಯಾದಿ. § 6:5 ಅಥವಾ. ಗುಲಾಮರೇ, ದಾಸರೇ. ಕೊಲೊ 3:22; ತಿಮೊ. 6:1; 1 ಪೇತ್ರ. 2:18: * 6:5 ಎಫೆ 5:22: 6:6 ಗಲಾ. 1:10. 6:8 ಗಲಾ. 3:28. ಕೊಲೊ 3:11. § 6:8 ಕೀರ್ತ 62:12. * 6:9 ಯೋಹಾ 13:13. ಯೋಬ. 31:13-15. 6:9 ರೋಮಾ. 2:11; ಗಲಾ. 2:6: 6:10 2 ತಿಮೊ. 2:1; 1 ಯೊಹಾ. 2:14; ಎಫೆ 3:16: § 6:10 ಎಫೆ 1:19: * 6:11 ಎಫೆ 6:13; 2 ಕೊರಿ 10:4: 6:11 ವ. 14. ರೋಮಾ. 13:12: 6:12 ಎಫೆ 1:21: § 6:12 ಲೂಕ 22:53; ಕೊಲೊ 1:13: * 6:12 ಎಫೆ 2:2: 6:12 ಎಫೆ 3:10: 6:14 1 ಪೇತ್ರ. 1:13; ಯೆಶಾ 11:5 § 6:14 ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7: * 6:15 ಯೆಶಾ 52:7; ರೋಮಾ. 10:15: 6:16 1 ಯೊಹಾ. 5:4: 6:16 ಮತ್ತಾ 13:19; 1 ಯೊಹಾ. 2:14: § 6:17 ಯೆಶಾ 59:17; 1 ಥೆಸ. 5:8: * 6:17 ಇಬ್ರಿ. 4:12; ಯೆಶಾ 11:4; 49:2: 6:18 ಯೂದ. 20: 6:18 ಲೂಕ 18:1: § 6:18 ಕೊಲೊ 4:2-4: * 6:18 1 ತಿಮೊ. 2:1: 6:18 ಮಾರ್ಕ 13:33: 6:19 ಎಫೆ 4:3. § 6:19 ಕೊಲೊ 4:3; 1 ಥೆಸ. 5:25; 2 ಥೆಸ. 3:1. * 6:20 2 ಕೊರಿ 5:20. 6:20 ಅ. ಕೃ. 28:20. 6:21 ಕೊಲೊ 4:7-9: § 6:21 ಅ. ಕೃ. 20:4. 2 ತಿಮೊ. 4:12; ತೀತ. 3:12: * 6:23 ಗಲಾ. 6:16; ಥೆಸ. 3:16: 6:24 1 ಕೊರಿ 16:22