12
ಇಸ್ರಾಯೇಲ್ಯರು ಸೋಲಿಸಿದ ಅರಸರ ಪಟ್ಟಿ
1 ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು
3 ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:
4 ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.
5 ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.
6 ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.
7 ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,
8 ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,
9 ಯೆರಿಕೋವಿನ ಅರಸನು - 1
ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1
10 ಯೆರೂಸಲೇಮಿನ ಅರಸನು - 1
ಹೆಬ್ರೋನಿನ ಅರಸನು - 1
11 ಯರ್ಮೂತಿನ ಅರಸನು - 1
ಲಾಕೀಷಿನ ಅರಸನು - 1
12 ಎಗ್ಲೋನಿನ ಅರಸನು - 1
ಗೆಜೆರಿನ ಅರಸನು - 1
13 ದೆಬೀರಿನ ಅರಸನು - 1
ಗೆದೆರಿನ ಅರಸನು - 1
14 ಹೊರ್ಮದ ಅರಸನು - 1
ಅರಾದಿನ ಅರಸನು - 1
15 ಲಿಬ್ನದ ಅರಸನು - 1
ಅದುಲ್ಲಾಮಿನ ಅರಸನು - 1
16 ಮಕ್ಕೇದದ ಅರಸನು - 1
ಬೇತೇಲಿನ ಅರಸನು - 1
17 ತಪ್ಪೂಹದ ಅರಸನು - 1
ಹೇಫೆರಿನ ಅರಸನು - 1
18 ಅಫೇಕದ ಅರಸನು - 1
ಲಷ್ಷಾರೋನಿನ ಅರಸನು - 1
19 ಮಾದೋನಿನ ಅರಸನು - 1
ಹಾಚೋರಿನ ಅರಸನು - 1
20 ಶಿಮ್ರೋನ್ಮೆರೋನಿನ ಅರಸನು - 1
ಅಕ್ಷಾಫಿನ ಅರಸನು - 1
21 ತಾನಕದ ಅರಸನು - 1
ಮೆಗಿದ್ದೋವಿನ ಅರಸನು - 1
22 ಕೆದೆಷಿನ ಅರಸನು - 1
ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1
23 ದೋರ್ ಪ್ರಾಂತ್ಯದ ದೋರಿನ ಅರಸನು - 1
ಗಿಲ್ಗಾಲಿನ ಅರಸನು - 1
24 ತಿರ್ಚದ ಅರಸನು - 1
ಒಟ್ಟು 31 ಮಂದಿ ಅರಸರು.