2
ಕ್ರೈಸ್ತರೆಲ್ಲರೂ ಸನ್ನಡತೆಯವರಾಗಿರಬೇಕೆಂಬ ಸ್ವಸ್ಥ ಬೋಧನೆ
ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. ಹಾಗೆಯೇ, ವೃದ್ಧ ಸ್ತ್ರೀಯರು *ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, §ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ * ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು. ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು. ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ §ಸತ್ಯವೂ *ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು; ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು. §ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ, 10 ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ *ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು. 11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; 12 ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ §ನಿರೀಕ್ಷೆಯನ್ನು, 13 ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. 14 *ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ §ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
15 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ *ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
* 2:3 1 ತಿಮೊ. 3:11 2:3 1 ತಿಮೊ. 3:8; 5:2 2:3 1 ತಿಮೊ. 2:9 § 2:4 1 ತಿಮೊ. 6:1 * 2:5 1 ತಿಮೊ. 5:14 2:5 ಆದಿ 3:16 2:6 1 ತಿಮೊ 5:1 § 2:7 2 ಕೊರಿ 11:3 * 2:7 1 ತಿಮೊ 2:2 2:7 1 ತಿಮೊ 6:3 2:8 ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16 § 2:9 1 ಪೇತ್ರ 2:18; ಕೊಲೊ 3:22 * 2:10 ಮತ್ತಾ 5:16; ಫಿಲಿ 2:15 2:11 1 ತಿಮೊ 2:4 2:11 ತೀತ 3:4 § 2:12 ತೀತ 1:2 * 2:14 ಕೀರ್ತ 130:8; 1 ಪೇತ್ರ 1:18-19 2:14 ತೀತ 3:8; ಎಫೆ 2:10 2:14 ಯೆಹೆ 37:23; ವಿಮೋ 19:5 § 2:14 1 ತಿಮೊ 2:6 * 2:15 ತೀತ 1:13; 1 ತಿಮೊ 5:20 2:15 1 ತಿಮೊ 4:12