4
*ಸ್ವರ್ಗೀಯ ಆರಾಧನೆ
1 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು †ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‡“ಇಲ್ಲಿಗೆ ಏರಿ ಬಾ,§ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. 2 ಕೂಡಲೆ ನಾನು *ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ †ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. 3 ಕುಳಿತಿದ್ದವನು ಕಣ್ಣಿಗೆ ‡ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ §ಕಾಮನಬಿಲ್ಲು ಇತ್ತು. 4 ಇದಲ್ಲದೆ ಸಿಂಹಾಸನದ ಸುತ್ತಲೂ *ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ †ಶುಭ್ರವಸ್ತ್ರ ಧರಿಸಿಕೊಂಡಿದ್ದ ‡ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. §ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. 5 ಸಿಂಹಾಸನದಿಂದ *ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ †ದೇವರ ಏಳು ಆತ್ಮಗಳನ್ನು ಸೂಚಿಸುವ ‡ಏಳು ದೀಪಗಳು ಉರಿಯುತ್ತಿದ್ದವು. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ §ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ *ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. 7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. 8 ಆ ನಾಲ್ಕು ಜೀವಿಗಳಿಗೆ †ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ‡ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ,
§“ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು,
*ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.
9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, 10-11 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ †ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ‡ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, § ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. *ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
* 4: ಯೆಹೆ. 1: † 4:1 ಪ್ರಕ 1:10; ವಿಮೋ 19:19, 20: ‡ 4:1 ಪ್ರಕ 11:12: § 4:1 ಪ್ರಕ 1:1, 19; 22:6: * 4:2 ಪ್ರಕ 1:10: † 4:2 ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22: ‡ 4:3 ಅಥವಾ, ವಜ್ರ. ಪ್ರಕ 21:11: § 4:3 ಯೆಹೆ. 1:27, 28; ಪ್ರಕ 10:1; ಆದಿ 9:13-17. * 4:4 ಪ್ರಕ 11:16: † 4:4 ಪ್ರಕ 3:4: ‡ 4:4 1ಪೂರ್ವ 24:1-18; ಪ್ರಕ 5:8: § 4:4 ವ. 10; ಯಾಕೋಬ. 1:12: * 4:5 ಪ್ರಕ 8:5,11,19; 16:18. ವಿಮೋ 19:16: † 4:5 ಪ್ರಕ 1:4: ‡ 4:5 ಜೆಕ. 4:2: § 4:6 ಪ್ರಕ 15:2; 1 ಅರಸು. 7:23, 39: * 4:6 ಯೆಹೆ. 1:5-14,18; 10:12: † 4:8 ಯೆಶಾ 6:2: ‡ 4:8 ವ. 6: § 4:8 ಯೆಶಾ 6:3: * 4:8 ಪ್ರಕ 1:4: † 4:10-11 ಪ್ರಕ 5:8, 14; 7:11; 11:16; 19:4: ‡ 4:10-11 ಪ್ರಕ 5:12: § 4:10-11 ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9: * 4:10-11 ಕೀರ್ತ 33:9-11: