3
ತನ್ನ ಪತ್ನಿಯೊಂದಿಗೆ ಹೋಶೇಯನ ಸಂಧಾನವಾದದ್ದು
ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.
ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ* ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು. ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು.
ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು. ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.
* 3:2 3:2 ಸುಮಾರು 170 ಗ್ರಾಂ 3:2 3:2 ಸುಮಾರು 195 ಕಿಲೋಗ್ರಾಂ