ಕೀರ್ತನೆ 134
ಯಾತ್ರಾ ಗೀತೆ.
ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ
ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.
ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ,
ಯೆಹೋವ ದೇವರನ್ನು ಸ್ತುತಿಸಿರಿ.
 
ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು,
ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.